Breaking News
Home / ರಾಜಕೀಯ / ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಜನಪ್ರತಿನಿಧಿಯಾಗುವ ಅವಕಾಶ

ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಜನಪ್ರತಿನಿಧಿಯಾಗುವ ಅವಕಾಶ

Spread the love

ಬೆಳಗಾವಿ: ಯುಪಿಎ ಅಧಿಕಾರ ಅವಧಿಯಲ್ಲಿ ಮಾಧ್ಯಮಗಳಲ್ಲಿ ಭೂಮಿಯ ತಳಭಾಗದಿಂದ ಆಗಸದವರೆಗೆ ಹಗರಣಗಳನ್ನು ನೋಡುವುದೇ ಆಗಿತ್ತು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಳೆದ ಏಳು ವರ್ಷ ಭ್ರಷ್ಟಾಚಾರ ರಹಿತ ಅಭಿವೃದ್ಧಿಪರ ಯೋಜನೆಗಳ ಕಾಲವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಹೇಳಿದ್ದಾರೆ.

ಮೋದಗಾ ಗ್ರಾಮದ ರಾಧಾಕೃಷ್ಣ ಸಭಾಭವನದಲ್ಲಿ ಜರುಗಿದ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ಯುಪಿಎ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿತ್ತು. ಆದರೆ ಇಂದು ಹಿಂದೆಂದೂ ಕಾಣದಷ್ಟು ಅಭಿವೃದ್ಧಿಪರ ಕಾರ್ಯಗಳು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವುದನ್ನು ನೋಡಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹತಾಶೆಗೆ ಒಳಗಾಗಿದ್ದಾರೆ ಎಂದರು.

ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ್ ಮಾತನಾಡಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಸತತ 20 ದಿನಗಳ ಕಾಲ ಜಿಲ್ಲೆಯ ಕಾರ್ಯಕರ್ತರು ಎಡಬಿಡದೆ ನಿರಂತರ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಮೂಲಕ ರಕ್ತದಾನ ಕಿಟ್ ವಿತರಣೆ ಹಾಗೂ ಹಣ್ಣು ಹಂಪಲ, ಬೀಜದುಂಡೆ ತಯಾರಿಕೆ, ಸಸಿ ನೆಡುವುದು, ಸ್ವಚ್ಛ ಭಾರತ, ಲಸಿಕೆ ಜಾಗೃತಿ ಹೀಗೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಬಿಜೆಪಿ ಕಾರ್ಯಕರ್ತರ ಕಾರ್ಯ ಶ್ಲಾಘನೀಯ ಎಂದರು.

ಸಂಸದೆ ಮಂಗಲ ಅಂಗಡಿ ಮಾತನಾಡಿ ಶಾಸಕರು ಮತ್ತು ಸಂಸದರು ಚುನಾವಣೆಗಳಿಗಿಂತ ಹೆಚ್ಚಿನ ಪರಿಶ್ರಮ ವಹಿಸಿ ಬರುವ ತಾಲೂಕ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಲು ಪರಿಶ್ರಮ ಹಾಕುವುದಾಗಿ ಹೇಳಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಕೇಂದ್ರ ಸರ್ಕಾರ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಆಲಿಸಿ ರೈತರ ಆದಾಯ ದ್ವಿಗುಣ ಗೊಳಿಸಲು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸುವ ಮನಸ್ಥಿತಿ ಇರುವ ವ್ಯಕ್ತಿಗಳು ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದರು.

ಉಪಸಭಾಪತಿ ಆನಂದ ಮಾಮನಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ನಿರಂತರವಾಗಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡಿ ಬಹುಮತದಿಂದ ಗೆಲ್ಲಿಸುವುದರೊಂದಿಗೆ ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದರು.

ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಮಾತನಾಡಿದರು. ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ್ ಮುಂಬರುವ ದಿನಗಳಲ್ಲಿ ಬಿಜೆಪಿ ಪದಾಧಿಕಾರಿಗಳು ಸಂಘಟನೆಗಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳನ್ನು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಪಾಟೀಲ್ ಸೇವಾ ಸಮರ್ಪಣ ಅಭಿಯಾನದಲ್ಲಿ ಕೈಗೊಂಡ ಕಾರ್ಯಗಳ ಬಗ್ಗೆ ವರದಿ ತಗೆದುಕೊಂಡರು.

ವೇದಿಕೆಯ ಮೇಲೆ ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ವಿಭಾಗ ಸಹ-ಪ್ರಭಾರಿ ಚಂದ್ರಶೇಖರ ಕವಟಗಿ, ಕಾಡ ಅಧ್ಯಕ್ಷ ಡಾ ವಿ.ಆಯ್. ಪಾಟೀಲ್, ಮಾಜಿ ಶಾಸಕರಾದ ಜಗದೀಶ್ ಮೆಟಗುಡ್ಡ, ಮನೋಹರ್ ಕಡೂಲ್ಕರ ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ