Breaking News

ಕರ್ನಾಟಕದ 31ನೇ ಜಿಲ್ಲೆ ವಿಜಯನಗರ: ನಾಳೆ ಘೋಷಣೆಗೆ ವೇದಿಕೆ ಸಜ್ಜು

Spread the love

ವಿಜಯನಗರ:ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲು ವೇದಿಕೆ ಸಿದ್ದವಾಗಿದೆ.

ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ವಿಜಯನಗರ ಎಂಬ ಪ್ರತ್ಯೇಕ ಜಿಲ್ಲೆಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ವಿಜಯನಗರ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಕಾರ್ಯಕ್ರಮ ನಾಳೆ ಗಾಂಧಿ ಜಯಂತಿಯಂದು ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಾಳೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಅದಕ್ಕಾಗಿ ಅಲ್ಲಿನ ಕಾರ್ಯಕ್ರಮಕ್ಕೆ ವಿದ್ಯಾರಣ್ಯ ವೇದಿಕೆ ಸಜ್ಜಾಗಿದ್ದು ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ನೆನಪಿಸುವಂತೆ ವೇದಿಕೆ ಸಜ್ಜುಗೊಳಿಸಲಾಗಿದೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ