Breaking News

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

Spread the love

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ.

ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ. ಇಬ್ಬರ ಸಂಬಂಧದ ಬಗ್ಗೆ ವಿವೇಕ್ ಗೆಳೆಯರಿಂದ ಕುಂಬಳಗೋಡು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಮುಂದುವರಿದ ಭಾಗವಾಗಿ ಇಬ್ಬರ ಫೋನ್ ಸಂಭಾಷಣೆ ಮಾಹಿತಿಯನ್ನು ಸಹ ಪಡೆಯಲಾಗುತ್ತಿದೆ. ಜೊತೆಗೆ ವಾಟ್ಸಪ್ ಚಾಟಿಂಗ್ ಬಗ್ಗೆ ಸಹ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆರು ತಿಂಗಳ ಹಿಂದಿನ, ಇಬ್ಬರ ನಡುವಿನ ಚಾಟಿಂಗ್, ಫೋನ್ ಕಾಲ್ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸರ ವಿಚಾರಣೆ ವೇಳೆ ನಟ ವಿವೇಕ್ ಹೇಳಿಕೆಗೂ ಮೊಬೈಲ್ ನಲ್ಲಿ ಸಿಕ್ಕ ಮಾಹಿತಿಗೂ ವ್ಯತ್ಯಾಸ ಕಂಡು ಬಂದರೆ ಆರೋಪಿ ವಿವೇಕ್‍ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಈಗಾಗಲೇ ನಟ ವಿವೇಕ್ ಇಬ್ಬರ ಪ್ರೀತಿಯ ಬಗ್ಗೆ ಒಪ್ಪಿಕೊಂಡಿದ್ದಾನೆ. ಹೀಗಾಗಿ ಸೌಜನ್ಯ ಆತ್ಮಹತ್ಯೆ ಕೇಸ್‍ನಲ್ಲಿ ಲಾಕ್ ಆಗೋದು ಪಕ್ಕಾ ಏನ್ನುತ್ತಿವೆ ಪೊಲೀಸ್ ಮೂಲಗಳು. ಇದರ ಜೊತೆಗೆ ಸೌಜನ್ಯ ತಂದೆ ದೂರಿನಲ್ಲಿ ಹೇಳಿರುವ ಅಂಶಗಳ ಬಗ್ಗೆಯೂ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಇಂದು ಮತ್ತೆ ವಿಚಾರಣೆಗೆ ನೋಟಿಸ್
ನಟ ವಿವೇಕ್ ಹಾಗೂ ಮೇಕಪ್ ಮ್ಯಾನ್ ಮಹೇಶ್ ನನ್ನು ಶುಕ್ರವಾರ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಮರಳಿ ಕಳುಹಿಸಿದ್ದಾರೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಪೊಲೀಸರು ಕಳುಹಿಸಿದ್ದಾರೆ. ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಯಾವುದೇ ಸಾಕ್ಷ್ಯಗಳು ಪತ್ತೆ ಆಗಿಲ್ಲ. ಹೀಗಾಗಿ ನಟ ವಿವೇಕ್, ಮೇಕಪ್ ಮ್ಯಾನ್ ಮಹೇಶ್ ಬಂಧನ ಡೌಟ್ ಎಂದು ಸಹ ಹೇಳಲಾಗುತ್ತಿದೆ.

 


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ