ಬೆಂಗಳೂರು: ಗಾಂಧೀಜಿಯಿಂದ ವಿಶ್ವದ ಅನೇಕ ದಿಗ್ಗಜರು ಸ್ಫೂರ್ತಿ ಪಡೆದಿದ್ದಾರೆ. ಆದರೆ ಬಿಜೆಪಿಯವರು ಗಾಂಧಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧೀಜಿ ಹಾಗೂ ಶಾಸ್ತ್ರಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು. ಬಿಜೆಪಿಯವರು ಅಸತ್ಯ ಹಾಗೂ ಹಿಂಸೆಯಲ್ಲಿ ನಂಬಿಕೆಯಿಟ್ಟವರು. ಮೋದಿ ವಿರುದ್ಧ ಮಾತಾಡಿದರೆ ದೇಶ ವಿರೋಧಿ ಹಣೆಪಟ್ಟಿ ಕಟ್ಟುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಬರಿ ಸುಳ್ಳು ಹೇಳುತ್ತಾರೆ. ಮೋದಿ ಏನೇ ಹೇಳಿದರೂ ಅದನ್ನು ಉಲ್ಟಾ ಅರ್ಥಮಾಡಿಕೊಳ್ಳಬೇಕು. ಗಾಂಧೀಜಿ ಕೊಂದವನನ್ನು ದೇಶಭಕ್ತ ಎಂದು ಕರೆಯುತ್ತಾರೆ. ಇವರಿಗೆ ನಾಚಿಕೆ ಆಗಬೇಕು. ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿಲ್ಲ, ಆದರೆ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ನಾಶವಾಗುತ್ತಿದೆ. ರೈತರು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ಮೋದಿ ತಲೆಕೆಡಿಸಿಕೊಳ್ಳುತ್ತಿಲ್ಲ. ರೈತರ ಹೋರಾಟ ಕಾಂಗ್ರೆಸ್ ಪ್ರೇರಿತ ಎನ್ನುತ್ತಾರೆ ಈ ರೀತಿ ಹೇಳುವವರಿಗೆ ಏನೆಂದು ಹೇಳಬೇಕು? ಮೋದಿಯವರನ್ನು ಹೀಗೆ ಬಿಟ್ಟರೆ ಭಿಕ್ಷೆ ಬೇಡುವ ಪರಿಸ್ಥಿತಿ ಬರುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.
Laxmi News 24×7