ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ನನಗೆ ಮತಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತೊಡಗಲು ಹೇಳಿದ್ದಾರೆ, ಶೀಘ್ರದಲ್ಲಿ 40 ಜನ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.