Breaking News

ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್‌ 26,320, ಸಿಪಿಎಂನ ಶ್ರೀಜಿಬ್‌ ಬಿಸ್ವಾಸ್‌ 4,201 ಮತಗಳನ್ನು ಪಡೆದಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ ಸ್ಪರ್ಧಿಸಿ ಜಯಗಳಿಸಿದ್ದಾರೆ.

ಮಮತಾ ಬ್ಯಾನರ್ಜಿ ಜಯಗಳಿಸಿದ ಹಿನ್ನೆಲೆಯಲ್ಲಿ ಟಿಎಂಸಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದೀದಿ ಜನರಿಗೆ ಕೆಲಸ ಮಾಡಿದ್ದು, ಈಗ ಮತ ನೀಡಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ರಚನೆಯಾಗಲಿದೆ ಎಂದು ಮಮತಾ ಸಹೋದರ ಕಾರ್ತಿಕ್‌ ಹೇಳಿದ್ದಾರೆ.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ