Breaking News

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಸೇರಿದ ಕಾರ್ ಡಿಕ್ಕಿ.. ಮಹಿಳೆ ಸ್ಥಳದಲ್ಲೇ ಸಾವು

Spread the love

ಹಾಸನ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ ಸೇರಿದ ಕಾರ್ ಬೈಕ್​ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ‌ ಜಿಲ್ಲೆ ಬೇಲೂರು ತಾಲ್ಲೂಕಿನ ಹನುಮಂತನಗರದ ಬಳಿ ನಡೆದಿದೆ.

ಶಾಸಕರ ಕಾರ್ ಚಾಲಕ ಕಾರ್​ನಲ್ಲಿ ಬೇಲೂರಿನತ್ತ ಬರುತ್ತಿದ್ದ.. ಈ ವೇಳೆ ಮುಂದೆ ಚಲಿಸುತ್ತಿದ್ದ ಬೈಕ್​ಗೆ ಡಿಕ್ಕಿಯಾಗಿದೆ. ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆ‌ ಹೂವಮ್ಮ (55) ಸಾವನ್ನಪ್ಪಿದ್ದು, ಪುತ್ರನಿಗೆ ಗಂಭೀರ ಗಾಯವಾಗಿದೆ. ಕಾರ್‌ ರಿಪೇರಿಗಾಗಿ ಬೆಂಗಳೂರಿಗೆ ಹೋಗುತ್ತಿದ್ದುದಾಗಿ ಶಾಸಕರ ಕಾರ್ ಚಾಲಕ ಹೇಳಿದ್ದಾನೆ ಎನ್ನಲಾಗಿದೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್

Spread the love ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ