Breaking News

ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ

Spread the love

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.

ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಲ್ಲಾ ಕೆಲಸಕ್ಕಾಗಿ ಪ್ರತಿದಿನ ಬೆಳಗಾವಿಯಿಂದ ರೈಲಿನಲ್ಲಿ ಓಡಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಲ್ಲಾ ಪ್ರೀತಿಸುತ್ತಿದ್ದ ಹುಡುಗಿ ಕಡೆಯವರು ಆತನನ್ನು ಕೊಲೆ ಮಾಡಿರುವುದಾಗಿ ಯುವಕನ ತಾಯಿ ನಜೀಮಾ ಶಾಯಿಕ್ ಆರೋಪಿಸಿದ್ದಾರೆ.

ಹುಡುಗಿಯಿಂದ ಬೇರೆಯಾಗುವಂತೆ ಬಿಜ್ರೆ ಮತ್ತು ಮಹಾರಾಜ್ ಸೇರಿದಂತೆ ಕೆಲವು ಜನರು ಕೆಲ ದಿನಗಳಿಂದ ತನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದರು.ಯುವತಿಯನ್ನು ತಡೆಯುವಂತೆ ಆಕೆಯ ತಾಯಿಯೊಂದಿಗೂ ಮಾತನಾಡಿದ್ದೆ ಆದರೆ, ಮುಲ್ಲಾ ಹಾಗೂ ಯುವತಿ ಮಾತು ಕೇಳುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ರೈಲ್ವೆ ಪೊಲೀಸರು, ಈ ವಿಚಾರವನ್ನು ಬೆಳಗಾವಿ ಜಿಲ್ಲಾ ಪೊಲೀಸರಿಗೆ ವರ್ಗಾಯಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ