Breaking News

ಮಕ್ಕಳ ಮಾರಾಟ ಪ್ರಕರಣ : ಆಶಾಕಾರ್ಯಕರ್ತೆ ಬಂಧನ

Spread the love

ಕೋಲಾರ: ರಾಜ್ಯದಲ್ಲಿ ದಿನದಿಂದದಿನಕ್ಕೆ ಮಕ್ಕಳ ಮಾರಾಟ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ವತ: ಆಶಾ ಕಾರ್ಯಕರ್ತೆಯರೇ ಮಕ್ಕಳ ಮಾರಾಟ ಜಾಲದ ಹಿಂದೆ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಮಗು ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.

 

ಕೋಲಾರದ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನೀಲಮ್ಮ ಹಾಗೂ ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರು ಮಗು ಮಾರಾಟದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಶಾಕಾರ್ಯಕರ್ತೆಯರಾದ ಸಂಧ್ಯಾ ಹಾಗೂ ರೂಪಾ ಎಂಬುವವರನ್ನು ಹಾಗೂ ಮಗುವಿನ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಹಿಂದೆ ಮಕ್ಕಳ ಮಾರಾಟ ಜಾಲವೇ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ