Breaking News

ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’

Spread the love

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ ಸಮಿತಿ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡುವಾಗ ‘ಬಿಜೆಪಿ- ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇನ್ನೊಬ್ಬರ ಮನೆಯೊಳಗೆ ಇಣುಕಿ ನೋಡುವ ಕೆಟ್ಟ ಚಟ ಸಿದ್ದರಾಮಯ್ಯ ಅವರಿಗೆ ಏಕೆ ಬಂತೋ ಗೊತ್ತಿಲ್ಲ. ಆದರೆ, ಅದು ಒಳ್ಳೆಯ ಲಕ್ಷಣವಲ್ಲ’ ಎಂದರು. ಒಳ ಒಪ್ಪಂದದ ಕಾರಣದಿಂದ ಜೆಡಿಎಸ್‌ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ರವಿ, ‘ಯಾವ ಪಕ್ಷದವರು ಯಾರಿಗೆ ಟಿಕೆಟ್‌ ನೀಡಬೇಕು ಎಂಬುದನ್ನು ನಾನು ಹೇಳಲು ಸಾಧ್ಯವೆ? ಕಾಂಗ್ರೆಸ್‌ನವರು ಯಾವತ್ತಾದರೂ ಆರೆಸ್ಸೆಸ್‌ನವರಿಗೆ ಟಿಕೆಟ್‌ ಕೊಟ್ಟಿದ್ದಾರಾ? ಅವರಿಗೆ ರಾಷ್ಟ್ರೀಯ ಹಿತ ಇಲ್ಲ ಎಂದು ನಾನು ಹೇಳಲು ಸಾಧ್ಯವೆ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ