Breaking News

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ

Spread the love

ನಾಗರಮುನ್ನೊಳ್ಳಿ, ಬೆಳಕುಡ, ಕಬ್ಬೂರ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ಸಭೆ ಉದ್ದೇಶಿಸಿ ಮಾತನಾಡಿದರು.

ಇಂದು ಇಡೀ ವಿಶ್ವ ಮಹಾಮಾರಿ ಕೊರೋನಾದಿಂದ ಬಳಲುತ್ತಿದೆ, ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಜಾಗೃತಿ ವಹಿಸಿ, ಕೊರೋನಾ ಹರಡದಂತೆ ನೋಡಿಕೊಳ್ಳಬೇಕು. ಈಗಾಗಲೇ ಪಡಿತರ ವಿತರಣೆಯಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದು, ತಾರತಮ್ಯ ಸರಿಪಡಿಸುವಂತೆ ಸೂಚಿಸಿ, ಮಾನ್ಯ ಪ್ರಧಾನಮಂತ್ರಿಗಳು ಕರೆ ನೀಡಿರುವ ಸಪ್ತ ನಿಯಮಗಳನ್ನು ಪಾಲಿಸಬೇಕು, ರೈತರ ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಕೊರೋನಾ ಹರಡಂತೆ ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಪಡೆದು, ಅಧಿಕಾರಿಗಳು ,ಆಶಾ , ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ನಾಗರಿಕರಿಗೆ ಮಾಸ್ಕ್ ವಿತರಿಸಿ, ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ