Breaking News

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Spread the love

ಬೆಳಗಾವಿ: ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್, ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಜಯ್ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು, ಆಯೋಗದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ರಾತ್ರಿ ರಾಜಕಾರಣ ಮಾಡಿದ್ದಕ್ಕೆ ಶಾಸಕಿಯಾಗಿ ಗೆದ್ದು ಬಂದಿದ್ದಾರೆ ಎಂದು ಹೇಳುವ ಮೂಲಕ ಸಂಜಯ್ ಪಾಟೀಲ್ ವಿವಾದ ಸೃಷ್ಟಿಸಿದ್ದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ