Breaking News

“RSS ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ” : ನಟ ಜಗ್ಗೇಶ್

Spread the love

ಬೆಂಗಳೂರು : ಆರ್‍ ಎಸ್‍ ಎಸ್ ಕುರಿತು ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಿನಿಮಾ ನಟ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘ ಪರಿವಾರದ ಬಗ್ಗೆ ತಿಳಿಹೇಳುವ ಪ್ರಯತ್ನ ಮಾಡಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು ಆರ್‍ ಎಸ್‍ ಎಸ್‍ ಸಂಘಟನೆಯ ಉದ್ದೇಶ, ಇದುವರೆಗೆ ಅದು ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಹೇಳಿಕೊಂಡಿದ್ದಾರೆ.

”ನಾನು ಕಂಡ ಅರ್ ಎಸ್ ಎಸ್ (ಓಂ, ಕ್ರೈಸ್ತ, ಅಲ್ಲಾ ಚಿಹ್ನೆ) ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ, ಕೋವಿಡ್ ಸಂದರ್ಭವಾಗಲಿ, ನೆರೆ ಬಂದ ಸಂದರ್ಭವಾಗಲಿ ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿದ್ಯೆ-ದಾನಕ್ಕಾಗಲಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ. ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು ಒಂದೇ ಆರ್ ಎಸ್ ಎಸ್” ಎಂದಿದ್ದಾರೆ.

”ಯಾರಿಗೆ ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥ ಬಿಟ್ಟು ಸಮಾಜಕ್ಕೆ ಹೆಗಲು ಕೊಡುವ ಕರ್ಮಯೋಗಿ ಆಗುತ್ತಾನೆ. ದೂರ ನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರಿಗು ವಿವರಣೆಗೆ ವ್ಯತಾಸವುಂಟು. ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ ಸಂಘವಿದು” .

”ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿದ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೇ ಮನೆ ದೇಶವಾಸಿಗಳೇ ಬಂಧುಗಳು ಅವರ ನಿಸ್ವಾರ್ಥ ಸಮಾಜ ಸೇವೆಯೇ ದೇವರ ಪೂಜೆ. ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥ ಗುಣ ಅರಿಯಿರಿ” ಎಂದಿದ್ದಾರೆ ಜಗ್ಗೇಶ್.


Spread the love

About Laxminews 24x7

Check Also

ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

Spread the loveಮೈಸೂರು: ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ