ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ ಖನಗಾವಿ (8), ಸವಿತಾ ಖನಗಾವಿ (28), ಲಕ್ಷ್ಮೀ ಖನಗಾವಿ (15), ಅರ್ಜುನ್ ಖನಗಾವಿ, ಕಾಶವ್ವ ಕೊಳೆಪ್ಪನವರ್ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಹಿರೇಬಾಗೇ ವಾಡಿ ಪೋಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದು ಕಾರ್ಯಾಚರಣೆ ನಡೆದಿದೆ. ಘಟನಾ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿ, ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
Laxmi News 24×7