Breaking News

ದಸರಾ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

Spread the love

ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ.

ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ ರಸ್ತೆಗಳಲ್ಲಿ ಜನ ದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ.

ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು ಸ್ಪರ್ಶಿಸುವುದು, ಸ್ಪರ್ಶಿಸಲು ಪ್ರಯತ್ನಿಸುವುದು, ಮಾರ್ಗಗಳನ್ನು ಸ್ಪರ್ಶಿಸುವಂತೆ ಮಕ್ಕಳಿಗೆ ಪ್ರೇರೇಪಿಸುವುದು ಇತ್ಯಾದಿ ಅಸುರಕ್ಷಿತ ಚಟುವಟಿಕೆಗಳನ್ನು ಮಾಡಿದರೆ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ಸುರಕ್ಷತೆಯನ್ನು ಕಾಪಾಡಲು ಚಾ.ವಿ.ಸ.ನಿ.ನಿ. ವತಿಯಿಂದ ಈಗಾಗಲೇ ಅಗತ್ಯ ಸಿಬ್ಬಂದಿ ವರ್ಗದವರು, ಅಧಿಕಾರಿಗಳನ್ನು ಆಯ್ದ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿದೆ.

ಪೆÇಲೀಸ್ ಆಯುಕ್ತರು, ಮೈಸೂರು ನಗರದವರಿಗೂ ಸಹ ಈ ಬಗ್ಗೆ ಮನವಿ ಮಾಡಿದ್ದು ಅಗತ್ಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಸಿಬ್ಬಂದಿ ವರ್ಗದವರನ್ನು ನಿಯೋಜಿಸಿ ಕೊಡುವಂತೆ ಕೋರಲಾಗಿದೆ.

ಯಾವುದೇ ವಿದ್ಯುತ್ ತಂತಿಗಳು ತುಂಡಾಗಿ ನೆಲದ ಮೇಲೆ ಬಿದ್ದಿದ್ದರೆ ತುರ್ತಾಗಿ 1912ಗೆ ಕರೆ ಮಾಡುವುದು. ಸೆಲಿ ಅಥವಾ ಫೋಟೋ ತೆಗೆಯುವ ಸಂದರ್ಭದಲ್ಲಿ ವಿದ್ಯುತ್ತಂತಿ ಮತ್ತು ವಿದ್ಯುತ್ ಬಲ್ಬ್ಗಳಿಂದ ದೂರ ಇರಬೇಕಾಗಿದ್ದು, ವಿದ್ಯುತ್ ಕಂಬಗಳಿಗೆ, ವಿದ್ಯುತ್ ತಂತಿಗಳಿಗೆ ತಾಗಿ ನಿಲ್ಲಬಾರದು.

ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿಅದ ದೂರ ಇರುವುದು. ದೀಪಾಲಂಕಾರ ವ್ಯವಸ್ಥೆಯನ್ನು ಹಾನಿ ಮಾಡುವ/ ವಿಕಾರಗೊಳಿಸುವ ಪ್ರಯತ್ನ ಮಾಡಬಾರದು. ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿಅದ ದೂರ ಇರುವುದು.

ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯಲ್ಲಿನ ದೋಷ ಅಥವಾ ದೂರುಗಳಿದ್ದಲ್ಲಿ ತಕ್ಷಣವೇ ಚಾ.ವಿ.ಸ.ನಿ.ನಿ.ಯ ಸ್ಥಳೀಯ ಅಕಾರಿಗಳನ್ನು ಸಂಪರ್ಕಿಸಿ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ