Breaking News

ಬೆಳಗಾವಿ ಮನೆ ಕುಸಿದು 7 ಮಂದಿ ಸಾವು -ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

Spread the love

ಬೆಳಗಾವಿ: ಮನೆ ಕುಸಿದು ಒಂದೇ ಕುಟುಂಬದ 6 ಮಂದಿ ಹಾಗೂ ಬಾಲಕಿ ಸಾವನ್ನಪ್ಪಿದ ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ದುರಂತರದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆ ಕುರಿತಂತೆ ಪ್ರಧಾನಿ ಮೋದಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದ್ದು, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರ ಸಂಗತಿಯಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೊಂದಿಗೆ ನಾವಿದ್ದೇವೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಮ್ಮವರನ್ನು ಕಳೆದುಕೊಂಡ ಕುಟುಂಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಂತಾಪ ಸೂಚಿಸಿದ್ದ ಸಿಎಂ ಬೊಮ್ಮಾಯಿ ಅವರು, ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಮಾಡಿದ್ದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ