25ನೇ ಕಿತ್ತೂರು ಉತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 23, 24ರಂದು ಅದ್ದೂರಿಯಾಗಿ ಉತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇನ್ನು ಉತ್ಸವದ ಕುರಿತಂತೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯ್ತು. ಸಭೆಯ ನಂತ್ರ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ‘ ಅಕ್ಟೋಬರ್ 23, 24ರಂದು 2 ದಿನ ಅದ್ಧೂರಿಯಾಗಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ 25ನೇ ಕಿತ್ತೂರು ಉತ್ಸವವನ್ನ ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಮಾಡೋಣ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ’ ಎಂದರು.