Breaking News

ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ- ಸಂತ್ರಸ್ಥರ ಧರಣಿ ಸತ್ಯಾಗ್ರಹ

Spread the love

ಚಿಕ್ಕೋಡಿ/ಬೆಳಗಾವಿ: ಪರಿಹಾರ ನೀಡುವಂತೆ ಆಗ್ರಹಿಸಿ ಕೃಷ್ಣಾ ನದಿ ತೀರದ ಪ್ರವಾಹ ಸಂತ್ರಸ್ಥರು ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಕೃಷ್ಣಾ ತೀರದ ಜುಗುಳ, ಮಂಗಾವತಿ, ಶಹಾಪುರ, ಮಳವಾಡ ಗ್ರಾಮಗಳ ಸಂತ್ರಸ್ಥರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಹ ಬಂದು ಹೋಗಿ ಮೂರು ತಿಂಗಳು ಕಳೆದರೂ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಬಂದಾಗ ಮನೆಗಳನ್ನು ಕಳೆದುಕೊಂಡಿದ್ದೇವೆ. ಇದುವರೆಗೆ ಸರ್ಕಾರದ ಪರಿಹಾರ ಬಂದಿಲ್ಲ. ಬೆಳೆ ಹಾನಿ ಪರಿಹಾರ ಸೇರಿದಂತೆ ಸರ್ಕಾರ ಘೋಷಿಸಿರುವ ಯಾವುದೇ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ಅಲ್ಲದೆ ಮನೆ ಮಂಜೂರು ಮಾಡುವಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲಾಗಿನ್ ಶುರು ಇದ್ದರೂ ಮನೆಗಳ ಮಂಜುರಾತಿಗೆ ತಾಲೂಕು ಆಡಳಿತ ಮುಂದಾಗಿಲ್ಲ. ತಕ್ಷಣವೇ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ