Breaking News

ಮೋದಿ ರಾಜಕೀಯ ಸೇವೆಗೆ ಧನ್ಯವಾದ ಅರ್ಪಿಸಲು ಕಮಲ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

Spread the love

ತುಮಕೂರು: ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಇಂದು ಪಂಜಿನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಂಜಿನ ಮೆರವಣಿಗೆ ಮೂಲಕ ಪ್ರಧಾನಿ ಮೋದಿಯವರ ರಾಜಕೀಯ ಸೇವೆಗೆ ಬಿಜೆಪಿ ಕಾರ್ಯಕರ್ತರು ಧನ್ಯವಾದ ಅರ್ಪಿಸಿದ್ದಾರೆ.

 

ಸೇವಾ ಮತ್ತು ಸಮರ್ಪಣಾ ಅಭಿಯಾನ ಹೆಸರಿನಲ್ಲಿ ಪಂಜಿನ ಮೆರವಣಿಗೆ ನಡೆಯಿತು, ಹನುಮಂತಪುರದ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪಂಜು ಹಿಡಿದು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ವೇಳೆ 20 ವರ್ಷ ಸಾರ್ಥಕ ರಾಜಕೀಯ ಸೇವೆ ಸಲ್ಲಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಎಂದು ಘೋಷಣೆ ಕೂಗಿದರು. ನಗರದ ಕೊಲ್ಲಾಪುರದಮ್ಮ ದೇವಸ್ಥಾನದವರೆಗೂ ಮೆರವಣಿಗೆ ಸಾಗಿದೆ. ಸಂಸದ ಜಿ.ಎಸ್.ಬಸವರಾಜು, ಶಾಸಕ ಜ್ಯೋತಿಗಣೇಶ್, ಎಂಎಲ್ಸಿಗಳಾದ ನರೇಂದ್ರಬಾಬು, ಚಿದಾನಂದ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ