ಬೆಳಗಾವಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಜಿಲ್ಲೆಯ ಖಾನಾಪುರ ಹೊರವಲಯದಲ್ಲಿ ಸೆ.28ರಂದು ನಡೆದಿದ್ದ ಯುವಕನ ಕೊಲೆ ಪ್ರಕರಣದ ಹಂತಕರನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಯುವತಿಯ ತಂದೆ ಈರಪ್ಪ ಕಂಬಾರ, ತಾಯಿ ಸುಶೀಲಾ ಕಂಬಾರ, ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ಮುತಗೇಕರ್, ಕುತಬುದ್ದೀನ್ ಬೇಪಾರಿ, ಪ್ರಲ್ಹಾದ್ ಸುಗತೆ, ಮಂಜುನಾಥ ಗೋಂದಳಿ, ಗಣಪತಿ ಸುಗತೆ, ಪ್ರಶಾಂತ ಪಾಟೀಲ್, ಪ್ರವೀಣ್ ಪೂಜೇರಿ, ಶ್ರೀಧರ್ ಡೋಣಿ ಸೇರಿ ಒಟ್ಟು 10 ಜನ ಬಂಧಿತ ಆರೋಪಿಗಳು.
ಸೆ. 28ರಂದು ಅರ್ಬಾಜ್ ಮೃತದೇಹ ಖಾನಾಪುರ ಹೊರವಲಯದ ರೈಲು ಹಳಿಯಲ್ಲಿ ಕೈಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
Laxmi News 24×7