Breaking News

ರಾಜಕೀಯ ನಿವೃತ್ತಿಯ ಸುಳಿವು ಕೊಟ್ಟ ಹೆಚ್ಡಿಕೆ

Spread the love

ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಅವರು ಹೇಳಿದರು.

ಖರ್ಗೆ, ಧರ್ಮಸಿಂಗ್, ಮುನಿಯಪ್ಪ ಸೋಲಿಗೆ ಕಾರಣ ಯಾರು? – ಡಿಕೆಶಿಗೆ ಕುಮಾರಸ್ವಾಮಿ ಪ್ರಶ್ನೆ
ಕಾಂಗ್ರೆಸ್ ಜತೆ ಮೈತ್ರಿ ಸರಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ಬಿಡದಿಯ ತೋಟ ಸೇರಿಕೊಂಡೆ. ನಂಗೆ ನೆಮ್ಮದಿ ಬೇಕಿತ್ತು. ಸಮ್ಮಿಶ್ರ ಸರಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲಿ ಸರಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ