ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ.
ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.