ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಕೇಂದ್ರ ಕಲ್ಲಿದ್ದಲು,ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ವಿ.ಸುನೀಲ್ ಕುಮಾರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.