Breaking News

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

Spread the love

ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ. ಈ ವಿಚಾರದಲ್ಲಿ ಎಐಸಿಸಿ ನಾಯಕಿ ಸೋನಿಯಾಗಾಂಧಿಯವರೂ ನನ್ನ ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ. ಮುಂದೆಯೂ ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತೇನೆ. ಇದರಲ್ಲಿ ಯಾವ ಅನುಮಾನವೂ ಬೇಡ ಎಂದು ಸ್ಪಷ್ಟಪಡಿಸಿದರು.

ಹಾನಗಲ್, ಸಿಂದಗಿ ಕ್ಷೇತ್ರದ ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿ ಅಲ್ಲ. ಹಾಗೆ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗಲಿದೆ. ಜನರು ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ನವರು ಒಳ್ಳೆಯ ಉದ್ದೇಶದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ. ಕುಮಾರಸ್ವಾಮಿ ಹೇಳುವುದು ಒಂದು, ಮಾಡೋದು ಇನ್ನೊಂದಾಗಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿರುವ ಉದ್ದೇಶದಿಂದ ಬಿಜೆಪಿಗೆ ಅನುಕೂಲ ಮಾಡಿಕೊಡುವ ತಂತ್ರ ಅಡಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಅವರ ಆಪ್ತರ ಮನೆಗಳ ಮೇಲಿನ ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂದು ಅನುಮಾನ ಕಾಡುತ್ತಿದ್ದು, ಐಟಿ ಅಧಿಕಾರಿಗಳು ಮೊದಲು ದಾಳಿಯ ಕುರಿತು ಬಹಿರಂಗಪಡಿಸಬೇಕು. ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿ ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗೆ ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ. ಎರಡು ದಿನಗಳಲ್ಲಿ ನಡೆಯುತ್ತಿರುವ ಬೆಳವಣಿಗೆ ನೋಡಿದರೆ ನನ್ನ ನಿರೀಕ್ಷೆ ನಿಜವಾಗಲಿದೆ ಎಂದು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ