Breaking News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ನ 2000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ದೇಶದಲ್ಲೇ ಅತಿದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ 2,056 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪೈಕಿ ಸಾಮಾನ್ಯ ವರ್ಗಕ್ಕೆ 810, ಆರ್ಥಿಕವಾಗಿ ಹಿಂದುಳಿದವರಿಗೆ 200, ಒಬಿಸಿಗೆ 560, ಎಸ್‌.ಸಿ.ಗೆ 324, ಎಸ್‌ಟಿ ಅಭ್ಯರ್ಥಿಗಳಿಗೆ 162 ಹುದ್ದೆಗಳು ಖಾಲಿ ಇವೆ.

ಅ. 25ರವರೆಗೆ https://sbi.co.in/ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಗಳ ಮಾರ್ಪಾಡಿಗೂ ಸಮಯ ನೀಡಲಾಗಿದೆ. ಮೊದಲು ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ.

ಅಧಿಕಾರಿ ಹುದ್ದೆಗೆ ಅರ್ಹತೆಯಾಗಿ, ಅಭ್ಯರ್ಥಿಗಳು ಯಾವುದೇ ಪದವಿ ಗಳಿಸಿರಬೇಕು. ಇಲ್ಲವೇ ಕೇಂದ್ರ ಸರ್ಕಾರದಿಂದ ತತ್ಸಮಾನ ಅರ್ಹತೆಯ ಸೇವೆಯಲ್ಲಿರಬೇಕು. ಚಾರ್ಟರ್ಡ್‌ ಅಕೌಂಟೆಂಟ್‌ ಅಥವಾ ಕಾಸ್ಟ್‌ ಅಕೌಂಟೆಂಟ್‌ ಓದಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಪ್ರಿಲಿಮ್ಸ್‌ ಮೇನ್‌ ಪರೀಕ್ಷೆ ಮೊದಲು ನಡೆಸಲಾಗುವುದು. ಅದರಲ್ಲಿ ಆಯ್ಕೆಯಾದವರಿಗೆ ಗ್ರೂಪ್‌ ಚರ್ಚೆ ಅಥವಾ ಸಮೂಹ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಕೊನೆಯದಾಗಿ ಅಂತಿಮ ಪಟ್ಟಿ ಸಿದ್ಧಪಡಿಸಲು ಸಂದರ್ಶನ ನಡೆಸಲಾಗುವುದು ಎಂದು ಆಯ್ಕೆ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ