Home / ಜಿಲ್ಲೆ / ಬೆಳಗಾವಿ / ಶ್ರೀ ಸಿದ್ಧೇಶ್ವರ ಮಂದಿರ ಪುನರೊದ್ಧಾರ ಹಾಗೂ ಪ್ರವಾಸಿ ತಾಣವಾಗಿ ಮಾರ್ಪಡಿಸಲು ಮನವಿ

ಶ್ರೀ ಸಿದ್ಧೇಶ್ವರ ಮಂದಿರ ಪುನರೊದ್ಧಾರ ಹಾಗೂ ಪ್ರವಾಸಿ ತಾಣವಾಗಿ ಮಾರ್ಪಡಿಸಲು ಮನವಿ

Spread the love

ಬೆಳಗಾವಿ: ಬೆಳಗಾವಿಗೆ ಭೇಟಿ ನೀಡಿದ ಪ್ರವಾಸೋದ್ಯಮ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕರವರನ್ನು ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ರವರು ಭೇಟಿ ಮಾಡಿ ಕಣಬರ್ಗಿಯಲ್ಲಿರುವ ಶ್ರೀ ಸಿದ್ಧೇಶ್ವರ ಮಂದಿರದ ಪುನರೊದ್ಧಾರ ಹಾಗೂ ಮಂದಿರದ ಪರಿಸರವನ್ನು ಪ್ರವಾಸಿ ಸ್ಥಾನವಾಗಿ ಮಾರ್ಪಡಿಸುವಂತೆ ಮನವಿ ಪತ್ರ ಸಲ್ಲಿಸಿದರು.

ಚೋಳ ಸಾಮ್ರಾಜ್ಯದ ವಾಸ್ತು ಶೀಲ್ಪದ ಉದಹಾರಣೆಯಾಗಿರುವ ಈ ಭವ್ಯ ಹಾಗೂ ಶ್ರದ್ಧೆ ಪ್ರತೀಕವಾಗಿರುವ ಈ ಐತಿಹಾಸಿಕ ದೇವಸ್ಥಾನದ ಪುನರೊದ್ಧಾರದಿಂದ ಉತ್ತರಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಹೇಚ್ಚಾನೇಚ್ಚು ಭಕ್ತರು ಆಗಮಿಸುತ್ತಾರೆ. ಪ್ರವಾಸಿ ಸ್ಥಾನವನ್ನಾಗಿ ಮಾರ್ಪಡಿಸುವುದರಿಂದ ಬೆಳಗಾವಿಯ ಅನೇಕ ಪ್ರವಾಸಿ ಸ್ಥಾನಗಳಲ್ಲಿ ಈ ಪ್ರಾಚೀನ ದೇವಸ್ಥಾನವನ್ನು ಸಹ ಸೇರ್ಪಡಿಸಬಹುದು ಎಂದು ಶಾಸಕ ಅನಿಲ ಬೆನಕೆ ಕೇಂದ್ರ ಸಚಿವರಿಗೆ ವಿಸ್ತರಿಸಿ ಅನುದಾನ ಮಂಜೂರಾತಿ ಮಾಡಬೇಕಾಗಿ ವಿನಂತಿಸಿದರು.

ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಮುಂಬರುವ ದಿನಗಳಲ್ಲಿ ಕಾಮಗಾರಿಯನ್ನು ಪೂರ್ತಿಗೊಳಿಸಲು ಸಹಕರಿಸುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ