Breaking News

ಹಾಫ್ ಮೆಂಟ್ಲು ಚಿತ್ರದ ನಿರ್ಮಾಪಕ ಅರೆಸ್ಟ್

Spread the love

: ಸಿನಿಮಾ ಸ್ಟೈಲ್ ನಲ್ಲೇ ಕಿಡ್ನ್ಯಾಪ್ ಮಾಡಲು ಹೋಗಿ ನಿರ್ಮಾಪಕನೊಬ್ಬ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.

ಹಾಫ್ ಮೆಂಟ್ಲು ಸಿನಿಮಾ ನಿರ್ಮಾಪಕ ಶಶಿಕುಮಾರ್ ಬಂಧಿತ ಆರೋಪಿ. ಐಟಿ ಅಧಿಕಾರಿಗಳೆಂದು ಹೇಳಿ ಈರುಳ್ಳಿ ವ್ಯಾಪಾರಿ ಶ್ರೀನಿವಾಸ್ ಎಂಬುವವರನ್ನು ಶಶಿಕುಮಾರ್ ಹಾಗೂ ಗ್ಯಾಂಗ್ ಕಿಡ್ನ್ಯಾಪ್ ಮಾಡಿತ್ತು. 50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಹಣ ಕೊಡದಿದ್ದಾಗ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿ ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ಬಿಟ್ಟು ಹೋಗಿದ್ದರು. ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಚಿತ್ರ ನಿರ್ಮಾಪಕ ಶಶಿಕುಮಾರ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಇದೀಗ ಶಶಿಕುಮಾರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಸಿನಿಮಾ ಮಾಡಿ ಲಾಸ್ ಆಗಿದ್ದ ನಿರ್ಮಾಪಕ ಶಶಿಕುಮಾರ್, ಕಿಡ್ನಾಪ್ ಮಾಡಲೆಂದೇ ಒಂದು ವಾರ ಕಾಲ ಈರುಳ್ಳಿ ವ್ಯಾಪಾರಿಯನ್ನು ಹಿಂಬಾಲಿಸಿ, ಪಕ್ಕಾ ಪ್ಲಾನ್ ಮಾಡಿ ಅಪಹರಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ