Breaking News

ಬೆಂಗಳೂರಿನಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ

Spread the love

ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗುತ್ತಿದೆ. ಇಂದು ಕೂಡ ಸಂಜೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ಏರಿಯಾಗಳಾದ ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್​​ ಮಾರ್ಕೆಟ್​​​​​, ಆರ್​​.ಆರ್​​ ನಗರ, ಕೊತ್ನೂರು ದಿಣ್ಣೆ, ಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ.

 

ಇನ್ನು, ಭಾರೀ ಮಳೆಯಾಗುತ್ತಿದ್ದು, ನಗರದ ಹಲವು ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗುತ್ತಿದೆ. ವಾರದಿಂದ ದಿಢೀರ್ ಸುರಿಯುತ್ತಿರುವ ಮಳೆಯಬ್ಬರಕ್ಕೆ ಜನರಿಗೆ ದಂಗು ಬಡಿದಂತಾಗಿದೆ. ಇನ್ನೊಂದಷ್ಟು ದಿನಗಳ ಕಾಲ ಮಳೆಯಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ