Breaking News

3 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಭೂಮಿಪೂಜೆ: ಬಿ.ಶ್ರೀರಾಮುಲು

Spread the love

ಚಿತ್ರದುರ್ಗ: ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಇಂದು ಭೂಮಿಪೂಜೆ ಮಾಡಿದ್ದಾರೆ.

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರ 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕುಸ್ಥಾಪನಾ ಸಮಾರಂಭ ನೆರೆವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಜಮೀನು ಮಂಜೂರು, ಗಂಗಾ ಕಲ್ಯಾಣ ಯೋಜನೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ವಯಂ ಉದ್ಯೋಗ ಸಾಲ ಸೌಲಭ್ಯ ಮುಂತಾದ ಸೌಲಭ್ಯಗಳನ್ನು ನೀಡುತ್ತಿದ್ದು, ಸಮುದಾಯದ ಎಲ್ಲರೂ ಸರ್ಕಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಾಜಿ ಶಾಸಕ ಪೂರ್ಣಮುತ್ತಪ್ಪ ಅವರನ್ನು ನೆನಪು ಮಾಡಿಕೊಳ್ಳಬೇಕು. ಅವರ ಪರಿಶ್ರಮದಿಂದ 2 ಎಕರೆ ಜಮೀನನ್ನು ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ನೀಡಿದ್ದಾರೆ. ಮದುವೆ ಮತ್ತು ಮುಂತಾದ ಅನೇಕ ಶುಭ ಸಮಾರಂಭಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಬೇಕು ಎಂಬ ದೂರದೃಷ್ಟಿಯಿಂದ ಜಮೀನು ನೀಡಿದ್ದಾರೆ ಎಂದರು.

ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ಹಟ್ಟಿ ಮಲ್ಲಪ್ಪನಾಯಕ ಸಮುದಾಯ ಭವನದ ಅಧ್ಯಕ್ಷ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಸಂಘದ ನಿರ್ದೇಶಕರಾದ ಬಸವರಾಜು, ಖಜಾಂಚಿ ಓಬಣ್ಣ, ಸಂಘದ ಹಿರಿಯ ನಿರ್ದೇಶಕರಾದ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಈ ವೇಳೆ ಇದ್ದರು. 


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ