Breaking News
Home / ರಾಜಕೀಯ / ಬಿಎಸ್‌ವೈ-ಸಿದ್ದರಾಮಯ್ಯ ತಡರಾತ್ರಿ ಭೇಟಿ:

ಬಿಎಸ್‌ವೈ-ಸಿದ್ದರಾಮಯ್ಯ ತಡರಾತ್ರಿ ಭೇಟಿ:

Spread the love

ಮೈಸೂರು, ಅ 12: ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತರ ಮೇಲೆ ಇತ್ತೀಚೆಗೆ ನಡೆದ ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹೊಸ ಬಾಂಬ್ ಸಿಡಿಸುವ ಮೂಲಕ ಚರ್ಚೆಯನ್ನು ಜೀವಂತವಾಗಿರಿಸಿದ್ದಾರೆ.

ಉಪ ಚುನಾವಣೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ನೀಡಿದ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದ್ದು, ಯಾವ ರಾಜಕೀಯ ಆಯಾಮಗಳಲ್ಲಿ ತಿರುವುಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

 

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರು ತಡರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದೇ, ಆದಾಯ ತೆರಿಗೆ ದಾಳಿಗೆ ಮೂಲ ಕಾರಣ ಎನ್ನುವ ಕುಮಾರಸ್ವಾಮಿಯವರ ಗಂಭೀರ ಆರೋಪದ ಬಗ್ಗೆ ಇಬ್ಬರು ಮಾಜಿ ಸಿಎಂಗಳ ಪ್ರತಿಕ್ರಿಯೆ ಇನ್ನೂ ವ್ಯಕ್ತವಾಗಿಲ್ಲ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಸಿದ್ದರಾಮಯ್ಯನವರ ವಿರುದ್ದ ಸತತ ದಾಳಿ ನಡೆಸುತ್ತಿರುವ ಕುಮಾರಸ್ವಾಮಿಯವರು, ಯಡಿಯೂರಪ್ಪನವರನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳಲೋಸ್ಕರ ಐಟಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕುಮಾರಸ್ವಾಮಿಯವರು ಹೇಳಿದ್ದು ಹೀಗೆ:

ಯಡಿಯೂರಪ್ಪನವರ ಆಪ್ತರ ಮನೆಯ ಮೇಲೆ ನಡೆದ ಆದಾಯ ತೆರಿಗೆ ದಾಳಿ

“ಮೊನ್ನೆ ನಡೆದ ಆದಾಯ ತೆರಿಗೆ ದಾಳಿ ಏನಿದೆಯೋ, ಅದು ರಾಜಕೀಯ ತಿಳಿದಿರುವಂತಹ ಅಲ್ಪಸ್ವಲ್ಪ ಪ್ರಜ್ಞೆ ಇರುವಂತವರಿಗೆ, ಯಾವ ಕಾರಣಕ್ಕಾಗಿ ರೈಡ್ ನಡೆದಿದೆ ಎನ್ನುವುದು ಗೊತ್ತಿರುವಂತಹ ವಿಚಾರ. ಇಂದಿನ ದಿನಪತ್ರಿಕೆಯೊಂದರಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಫೋಟೋ ಹಾಕಿ( ಹೆಸರು ಉಲ್ಲೇಖಿಸದೇ, ಬಿಎಸ್‌ವೈಮತ್ತು ಸಿದ್ದರಾಮಯ್ಯ) ಇಬ್ಬರ ನಡುವೆ ಒಳಗಡೆ ಏನೋ ನಡೀತಾ ಇತ್ತು ಎನ್ನುವುದರ ಬಗ್ಗೆ ವರದಿಯಾಗಿದೆ” – ಎಚ್.ಡಿ.ಕುಮಾರಸ್ವಾಮಿ.

ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ತಡರಾತ್ರಿ ಭೇಟಿ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ