Breaking News

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.

Spread the love

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತ ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

“ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡಬಾರದಿತ್ತು. ಅಚಾತುರ್ಯದಿಂದ ಇಂತಹ ಘಟನೆ ನಡೆದಿದೆ. ನನ್ನಿಂದಲೇ ದೊಡ್ಡ ತಪ್ಪಾಗಿದೆ. ಅವರು ಯಾವುದೇ ಶಿಕ್ಷೆ ನೀಡಿದರೂ ಅನುಭವಿಸಲು ಸಿದ್ಧ ಇದ್ದೇನೆ. ಶಿವಕುಮಾರ್ ಅವರು ನನಗೆ ರಾಜಕೀಯವಾಗಿ ಗಾಡ್‌ಫಾದರ್. ಅವರೇ ನನಗೆ ಅವಕಾಶಗಳನ್ನು ನೀಡಿದ್ದರು. ಈ ರೀತಿ ಆಗಿರುವುದಕ್ಕೆ ಬಹಳ ನೊಂದಿದ್ದೇನೆ” ಎಂದು ಅವರು ಗುರುವಾರ ಕಣ್ಣೀರಿಡುತ್ತಾ ಕ್ಷಮೆ ಕೋರಿದ್ದಾರೆ.

“ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ನಿಜ. ಆದರೆ, ನನ್ನ ರಕ್ತ, ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿಯೇ ಕೆಲಸ ಮಾಡುತ್ತೇನೆ. ಪಕ್ಷದ ಸದಸ್ಯತ್ವ ಇಲ್ಲದಿದ್ದರೂ ಸಹ ನನ್ನ ಬದ್ಧತೆಯನ್ನು ಪಕ್ಷಕ್ಕಾಗಿ ಉಳಿಸಿಕೊಂಡು ಕೆಲಸ ಮುಂದುವರಿಸುತ್ತೇನೆ ಎಂದು ಸಲೀಂ ಗುರುವಾರ ಹೇಳಿಕೆ ನೀಡಿದ್ದಾರೆ.

‘ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಯಾವುದೇ ಕೆಟ್ಟ ದೃಷ್ಟಿಯಿಂದ ಹೇಳಿಕೆ ನೀಡಿಲ್ಲ. ಕೆಲ ದಿನಗಳ ಹಿಂದೆ ಅವರು ರಾಜಭವನದ ಮುಂದೆ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಶಿವಕುಮಾರ್ ಅವರು ಕುಡಿದಿದ್ದಾರೆ, ಲೋ ಬಿಪಿ ಆಗಿದೆಯಾ ಎಂಬ ಕುರಿತು ಚರ್ಚೆಗಳು ನಡೆದಿದ್ದವು. ಆ ಬಗ್ಗೆ ಉಗ್ರಪ್ಪನವರಿಗೆ ಹೇಳುತ್ತಿದ್ದೆ. ಸಿದ್ದರಾಮಯ್ಯ ಅವರ ತರ ಖಡಕ್ ಆಗಿ ಇರಬೇಕು. ಆ ರೀತಿಯ ಬಾಡಿ ಲಾಂಗ್ವೇಜ್ ಇದ್ದರೆ ಮುಂದೆ ಪಕ್ಷ ಅಧಿಕಾರಕ್ಕೆ ಬರಲು ಸುಲಭವಾಗುತ್ತದೆ ಎಂಬ ಕುರಿತು ಮಾತನಾಡಿದ್ದೆ ಅಷ್ಟೇ’ ಎಂದು ಸಲೀಂ ಹೇಳಿದ್ದಾರೆ.


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ