ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ ವೇದನೆ ಮಾನ್ಯ ಸಚಿವರಾದ ಕೆ.ಸುಧಾಕರ್ ಅವರಿಗೆ ತಿಳಿದಿಲ್ಲವೇ ಎಂದು ಕಿಡಿಕಾರಿದ್ದಾರೆ.
ವೇತನ ಮತ್ತು ಭತ್ಯೆಗಾಗಿ ಆರೋಗ್ಯ ಸಿಬ್ಬಂದಿ ಈಗ ಮುಷ್ಕರದ ಹಾದಿ ಹಿಡಿದಿದ್ದಾರೆ. ಕೊರೊನಾ ವೇಳೆಯಲ್ಲಿ ಜೀವದ ಹಂಗು ತೊರೆದು ಸೇವೆ ಮಾಡಿದ ಸಿಬ್ಬಂದಿಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಸಚಿವ ಸುಧಾಕರ್ ಹಾಗೂ ಆಯುಕ್ತರು ಸಿಬ್ಬಂದಿಗಳ ಸಮಸ್ಯೆಯತ್ತ ಗಮನಹರಿಸಬೇಕು. ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.