Breaking News

ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್​ಗೆ ಬಂದ್ರು ಸಿಎಂ ಬೊಮ್ಮಾಯಿ..!

Spread the love

ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್​​ ಆರಂಭಿಸಿದ್ದಾರೆ.

ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು ವೀಕ್ಷಿಸುತ್ತಿದ್ದಾರೆ.

ಸಿಟಿ ರೌಂಡ್ಸ್​​ಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ.. ಮಳೆಯಿಂದ ಹಾನಿಗೊಳಗಾದ ಸ್ಥಳಗಳ ವೀಕ್ಷಣೆಗೆ ತೆರಳುತ್ತಿದ್ದೇನೆ. ಆ ಬಳಿಕ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಲು ಸೂಚನೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲೂ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

 

 


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ