Breaking News

ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

Spread the love

ಬೆಂಗಳೂರು : ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಮಹತ್ವದ ಸಭೆ ನಡೆಸಲಾಯಿತು.

ವಿಧಾನಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಭಾಗಿಯಾಗಿ ತಮ್ಮ ಅಭಿಪ್ರಾಯ ಮುಂದಿಟ್ಟರು.

ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಶಾಸಕರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶ್ರೀಕಂಠೇಗೌಡ, ಅಪ್ಪಾಜಿಗೌಡ, ರವೀಂದ್ರ ಶ್ರೀಕಂಠಯ್ಯ,ಶ್ರೀನಿವಾಸ್, ಬಡಗಲಪುರ ನಾಗೇಂದ್ರ ಸೇರಿ ಹಲವು ರೈತ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

420 ಕೋಟಿ ರೂ. ನಷ್ಟ

2008 ರಿಂದ ಮೂರು ಸರಕಾರಗಳಿಂದ ಒಟ್ಟು 700 ಕೋಟಿ ರೂಪಾಯಿಯಷ್ಟು ಹಣವನ್ನು ಕಾರ್ಖಾನೆಯ ಪುನಶ್ಚೇತನಕ್ಕಾಗಿ ಕೊಡಲಾಗಿತ್ತಾದರೂ, ಸುಮಾರು 420 ಕೋಟಿ ರೂ. ನಷ್ಟದಲ್ಲಿದೆ. ನಷ್ಟದ ಹಿನ್ನೆಲೆಯಲ್ಲಿ ಕಾರ್ಖಾನೆಯ ಕಾರ್ಯವನ್ನು ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ.

 

Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ