Breaking News

ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಬಹಳ ಮುಖ್ಯ : ಬಿ.ಸಿ.ಪಾಟೀಲ

Spread the love

ಹಾವೇರಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವುದಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಗೆಲ್ಲಿಸುವುದು ಬಹಳ ಮುಖ್ಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಜಿಲ್ಲೆಯ ಹಿರೇಕೆರೂರ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ದಿವಂಗತ ಸಿ.ಎಂ.ಉದಾಸಿ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ನೀರಾವರಿ, ರಸ್ತೆ ಸೇರಿದಂತೆ ಅನೇಕ ಯೋಜನೆಗಳನ್ನು ಈ ಕ್ಷೇತ್ರಕ್ಕೆ ತಂದಿದ್ದರು. ಅವರಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಶಿವರಾಜ ಸಜ್ಜನರ ಅವರು ಕೂಡ ಈ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುದಾನವನ್ನು ತಂದು ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂದರು.

ಈ ಕ್ಷೇತ್ರದ ಅಭಿವೃದ್ಧಿಗೆ ಇದೇ ಜಿಲ್ಲೆಯವರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯಂಂತ್ರಿಗಳಾಗಿರುವುದರಿಂದ, ಸಂಸದರೂ ನಿಮ್ಮವರೇ ಆಗಿರುವರು, ನಾನೂ ಸಹ ನಿಮ್ಮ ಜಿಲ್ಲೆಯವನೇ ಆಗಿರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುತ್ತೇವೆ ಆದ್ದರಿಂದ ಬಿಜೆಪಿ ಅಭ್ಯರ್ಥಿಯಾದ ಶಿವರಾಜ ಸಜ್ಜನರ ಅವರಿಗೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಅವರನ್ನು ಆಯ್ಕೆ ಮಾಡುವಂತೆ ವಿನಂತಿಸಿಕೊಂಡರು.

ದಿವಂಗತ ಸಿ.ಎಂ.ಉದಾಸಿ ಅವರು ಹೇಗೆ ಈ ಕ್ಷೇತ್ರದ ಅಭೀವೃದ್ಧಿಗೆ ಶ್ರಮಿಸುವುದರೊಂದಿಗೆ ಹೇಗೆ ಅನುದಾನವನ್ನು ತರುತ್ತಿದ್ದರೋ ಅದೇ ರೀತಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಕೂಡ ಅನುದಾನವನ್ನು ತಂದು ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಅವರೊಂದಿಗೆ ಸರ್ಕಾರವೂ ಕೈಜೋಡಿಸುತ್ತದೆ ಎಂದು ತಿಳಿಸಿದರು.

ಹೊಸಳ್ಳಿ, ಹಾರೇಗೊಪ್ಪ, ಹುಣಶೆಟ್ಟಿಕೊಪ್ಪ, ಹಿರೇಕಣಗಿ, ಬಿದರಿಕೊಪ್ಪ, ಗೊಟಗೋಡಿ, ಹಂದಿಹಾಳ, ಮಂತಗಿ, ಸಾಗರಹಳ್ಳಿ, ಲಕ್ಷ್ಮೀಪುರ ಸೇರಿದಂತೆ ಇನ್ನು ಕೆಲ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ದಿನೇಶ, ರಾಜು ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.


Spread the love

About Laxminews 24x7

Check Also

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

Spread the loveಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ