Breaking News

ಮಂಗ್ಳೂರಿನ ಪ್ರತಿಷ್ಠಿತ ವಕೀಲನ ಕರಾಳ ಮುಖ ಬಯಲು: ವಿದ್ಯಾರ್ಥಿನಿ

Spread the love

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು ಬಂದಿದ್ದಳು. ಕಚೇರಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾಗಿದೆ. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದ್ದಾರೆಂದು ಸಂತ್ರಸ್ತೆ ದೂರು ನೀಡಿದ್ದಾರೆ.

12 ಕ್ಕೂ ಹೆಚ್ಚು ಬ್ಯಾಂಕ್​​ಗಳಿಗೆ ರಾಜೇಶ್​ ಭಟ್​, ಕಾನೂನು ಸಲಹೆಗಾರರಾಗಿದ್ದಾರೆ. ಘಟನೆಯ ಬಳಿಕ ಸಂತ್ರಸ್ತೆಗೆ ಕರೆ ಮಾಡಿರುವ ರಾಜೇಶ್​, ಕೆಲಸಕ್ಕೆ ಬರುವಂತೆ ಸಂತ್ರಸ್ತೆಯನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಗೊತ್ತಿಲ್ಲದೆ ತಪ್ಪು ಮಾಡಿದೆ. ಇನ್ನು ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ದಯವಿಟ್ಟು ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ.

ನಿಮ್ಮ ಮನೆಯಲ್ಲಿ ನಿಮಗೆ ಪತ್ನಿ ಇಲ್ಲವೆ. ನಿಮಗೆ ವಯಸ್ಸಾಗಿದೆ. ನಿಮ್ಮ ಮಗಳನ್ನು ಇದೇ ರಿತಿ ನೋಡುತ್ತೀರಾ ಎಂದು ಸಂತ್ರಸ್ತೆ ರಾಜೇಶ್​ ವಿರುದ್ಧ ಆಕ್ರೋಶ ಹೊರಹಾಕಿದ್ದಾಳೆ. ನನಗೆ ಯಾರು ಇಲ್ಲ ಅಂದುಕೊಂಡು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದೀರಿ. ನೀವು ಶ್ರೀಮಂತರು ಏನು ಬೇಕಾದರೂ ಮಾಡುತ್ತೀರಿ. ಅದನ್ನೆಲ್ಲ ನೋಡಿಕೊಂಡ ಸುಮ್ಮನಿರಲು ಸಾಧ್ಯವಾಗುವುದಿಲ್ಲ. ಇನ್ನು ಮುಂದಿನ ನನ್ನ ನಂಬರ್​ಗೆ ಕರೆ ಮಾಡಬೇಡಿ ಎಂದು ರಾಜೇಶ್​​ರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಫೋನ್​ ಸಂಪರ್ಕ ಕಡಿತಗೊಳಿಸಿದರು.

ಇದೀಗ ರಾಜೇಶ್​ ಭಟ್​ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ಸಂಘಟನೆಯ ನಿಯೋಗವೊಂದು ಮಂಗಳೂರು ಪೊಲೀಸ್​ ಆಯುಕ್ತರನ್ನು ಭೇಟಿ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಕೆ.ಎಸ್​.ಎನ್​. ರಾಜೇಶ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ದೂರು ಸಲ್ಲಿಸಿದ್ದಾರೆ. ಕೆ.ಎನ್​ ರಾಜೇಶ್​, ಇಂಟರ್ನ್​ಶಿಪ್​ಗೆ ಬಂದ ಅನೇಕ ಯುವತಿಯರ ಜತೆ ಹೀಗೆ ನಡೆದುಕೊಂಡಿದ್ದಾರೆ. ವಾಟ್ಸ್​ಆಯಪ್​ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ