Breaking News

ಹೇಳುವುದು ಆಚಾರ, ಮಾಡುವುದು ಅನಾಚಾರ; ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯ ನೋಡಿದ್ದು ಯಾವ ಪಕ್ಷದವರು ? ಬಿಜೆಪಿಗೆ ತಿರುಗೇಟು ನೀಡಿದ JDS

Spread the love

ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿ ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ. ಸಮಾಜದ ಉದ್ದಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ..ರಾಜ್ಯದಲ್ಲಿ ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು ? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು ? ಎಂದು ಪ್ರಶ್ನಿಸಿದ

ಆರ್ ಎಸ್ ಎಸ್ ಸಂಸ್ಕಾರ, ಶಿಸ್ತಿನ ಬಗ್ಗೆ ಮಾತನಾಡುವವರು ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು ? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು ? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತಿಲ್ಲ ಎಂಬ ದರ್ಪವೇ ? ಅನಾಚಾರ ಎಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಆರ್ ಎಸ್ ಎಸ್ ತರಬೇತಿ ಬಗ್ಗೆ ಮಾತನಾಡಿದರೆ ಬಿಜೆಪಿಯವರು ಯು ಪಿ ಎಸ್ ಸಿಗೆ ಸಮೀಕರಣ ಮಾಡಿ ಕೆ ಪಿ ಎಸ್ ಸಿ ಬಗ್ಗೆ ಎಗ್ಗಿಲ್ಲದ ಸುಳ್ಳು ಹೇಳುತ್ತಿದ್ದೀರಿ. ಸಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ ಪಿ ಎಸ್ ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ? ಎಂದು ಕಿಡಿಕಾರಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ