Breaking News
Home / ರಾಜಕೀಯ / ಕಾಂಗ್ರೆಸ್‌ಗೆ ಅಭ್ಯರ್ಥಿ ಸಿಗದೆ ಮನಗೂಳಿ ಪುತ್ರನನ್ನು ಹೈಜಾಕ್ ಮಾಡಿದೆ; ಎಚ್‌ಡಿಕೆ

ಕಾಂಗ್ರೆಸ್‌ಗೆ ಅಭ್ಯರ್ಥಿ ಸಿಗದೆ ಮನಗೂಳಿ ಪುತ್ರನನ್ನು ಹೈಜಾಕ್ ಮಾಡಿದೆ; ಎಚ್‌ಡಿಕೆ

Spread the love

ವಿಜಯಪುರ, ಅಕ್ಟೋಬರ್ 20: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ, ಜಾತ್ಯತೀತ ಜನತಾದಳ ಮತ್ತು ಸಿಂದಗಿ ಕ್ಷೇತ್ರದ ನಡುವೆ ವಾತ್ಸಲ್ಯಪೂರ್ಣವಾದ ಕರುಳುಬಳ್ಳಿಯ ಸಂಬಂಧ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದರು.

ಸಿಂದಗಿ ಕ್ಷೇತ್ರದ ಹೊಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಮಾಡುವ ವೇಳೆ ಅವರು ಮಾತನಾಡಿದರು. ಸುಮಾರು ಮೂವತ್ತು ವರ್ಷಗಳ ಕಾಲ ದಿವಂಗತ ಎಂ.ಸಿ. ಮನಗೂಳಿ ಕಾಕಾ ದೇವೇಗೌಡರ ಕುಟುಂಬದ ಸದಸ್ಯರಂತೆ ಇದ್ದರು. ಅವರನ್ನು ದೇವೇಗೌಡರು ಸ್ವಂತ ಸಹೋದರನಂತೆ ನೋಡುತ್ತಿದ್ದರು. ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಸಲ ಗೆದ್ದ ಅವರನ್ನು ಎರಡೂ ಸಲವೂ ಪಕ್ಷ ಮಂತ್ರಿ ಮಾಡಿತ್ತು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೆನಪು ಮಾಡಿಕೊಂಡರು.

ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಆಗಿದ್ದಾಗ ದೇವೇಗೌಡರು ಸಿಂದಗಿ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದರು. ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದರು. ಅದಕ್ಕೆ ಕುರುಹಾಗಿ ದೇವೇಗೌಡರು ಮತ್ತು ಮನಗೂಳಿ ಅವರಿಬ್ಬರ ಪ್ರತಿಮೆಗಳನ್ನು ಜನರು ಕೃತಜ್ಞತಾಪೂರ್ವಕವಾಗಿ ಇಲ್ಲಿ ಸ್ಥಾಪನೆ ಮಾಡಿದ್ದಾರೆ. ಇಂಥ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳುವ ಅದೃಷ್ಟ ನನ್ನದು ಎಂದರು.

ಎಂ.ಸಿ. ಮನಗೂಳಿ ಪುತ್ರನನ್ನು ಹೈಜಾಕ್ ಮಾಡಿದ್ದಾರೆ

ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯ ಗತಿ ಇಲ್ಲದೆ ಮನಗೂಳಿ ಕಾಕಾರವರ ಪುತ್ರನನ್ನು ಹೈಜಾಕ್ ಮಾಡಿ ಅಭ್ಯರ್ಥಿ ಮಾಡಿದ್ದಾರೆ. ಆದರೆ, ಮನಗೂಳಿಯವರ ಜನಪ್ರಿಯತೆ, ಅವರು ಮಾಡಿದ ಸೇವೆ ಹಾಗೂ ಸಿಂದಗಿ ಕ್ಷೇತ್ರಕ್ಕೆ ಜೆಡಿಎಸ್ ಕೊಟ್ಟಿರುವ ಕೊಡುಗೆಯನ್ನು ಹೈಜಾಕ್ ಮಾಡಲಾಗದು ಎಂದು ಮಾಜಿ ಸಿಎಂ ಎಚ್‌ಡಿಕೆ ಕಾಂಗ್ರೆಸ್ ಪಕ್ಷಕ್ಕೆ ಕುಟುಕಿದರು.

ಮನಗೂಳಿ ಕಾಕಾ ಮಾಡಿರುವ ಸಾಧನೆಗಳನ್ನು ಕಾಂಗ್ರೆಸ್ ಅಭ್ಯರ್ಥಿ ಈಗ ಹೈಜಾಕ್ ಮಾಡಲು ಹೊರಟಿದ್ದಾರೆ. ಅದಕ್ಕಾಗಿ ಸಾಧನೆಗಳ ಪುಸ್ತಕ ಮಾಡಿ ಹಂಚುತ್ತಿದ್ದಾರೆ. ಆದರೆ, ಸಿಂದಗಿ ಜನತೆಗೆ ನಮ್ಮ ಪಕ್ಷದ ಮೇಲೆ ಅಪಾರ ಪ್ರೀತಿ, ನಂಬಿಕೆ ಇದೆ. ಮಾಡಿದ ಸೇವೆಯ ನೆನಪಿದೆ. ಅದನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ನಮ್ಮ ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್

ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಯಾವ ನಾಲಿಗೆಯಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎನ್ನುತ್ತಿದ್ದರೋ, ಅದೇ ನಾಯಕರೂ ಕಳೆದ ಚುನಾವಣೆ ನಂತರ ಸರಕಾರ ಮಾಡಬೇಕು ಎಂದು ನಮ್ಮ ಪಕ್ಷದ ಬಾಗಿಲಲ್ಲಿ ನಿಂತಿದ್ದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ