Breaking News

‘ಕರ್ನಾಟಕದಿಂದ ಗೋವಾಗೆ ಪ್ರತಿದಿನ 2 ಟನ್ ದನದ ಮಾಂಸ’

Spread the love

ಪಣಜಿ: ಕರ್ನಾಟಕದಿಂದ ಪ್ರತಿದಿನ 2,000 ಕೆಜಿಗೂ ಹೆಚ್ಚು ದನ ಮತ್ತು ಎಮ್ಮೆಯ ಮಾಂಸ ಗೋವಾಗೆ ಬರುತ್ತದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ.

ಗೋವಾ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ‘ಕಳೆದ ಆರು ತಿಂಗಳಲ್ಲಿ ಕರ್ನಾಟಕದಿಂದ ಗೋವಾಗೆ 388 ಟನ್‌ಗಳಷ್ಟು ದನ ಮತ್ತು ಎಮ್ಮೆಯ ಮಾಂಸವನ್ನು ತರಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿನ ವ್ಯಾಪಾರಿಗಳು ಪ್ರತಿದಿನ ಗೋವಾಗೆ ದನದ ಮಾಂಸ ಕಳುಹಿಸುತ್ತಾರೆ’ ಎಂದು ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

‘ಗೋವಾ- ಕರ್ನಾಟಕ ಗಡಿಯಲ್ಲಿ ಸಂಬಂಧಿತ ಅಧಿಕಾರಿಗಳು ಕರ್ನಾಟಕದ ದನದ ಮಾಂಸ ವ್ಯಾಪಾರಿಗಳಿಂದ ಸಂಗ್ರಹಿಸುವ ತೆರಿಗೆಯ ಮೊತ್ತದಿಂದ ಈ ಪ್ರಮಾಣವನ್ನು ಲೆಕ್ಕಹಾಕಲಾಗಿದೆ. ಪ್ರತಿದಿನ ಕರ್ನಾಟಕದಿಂದ ಸರಾಸರಿ 2,120 ಕೆ.ಜಿಯಷ್ಟು ದನ ಮತ್ತು ಎಮ್ಮೆಯ ಮಾಂಸ ಗೋವಾಗೆ ಬರುತ್ತದೆ ಎಂದು ತೆರಿಗೆ ದಾಖಲೆಗಳು ಹೇಳುತ್ತವೆ’ ಎಂದು ಅವರು ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

‘ಕರ್ನಾಟಕ ವಿಧಾನಸಭೆಯ ಗೋಹತ್ಯೆ ತಡೆ ಕಾಯ್ದೆಯನ್ನು ಜಾರಿಗೆ ತಂದ ನಂತರ ಗೋವಾಗೆ ಪೂರೈಕೆಯಾಗುವ ದನದ ಮಾಂಸದಲ್ಲಿ ಭಾರಿ ವ್ಯತ್ಯಯವಾಗಿದೆ’ ಎಂದು ಅವರು ಹೇಳಿದ್ದಾರೆ. ಗೋವಾದ ಒಟ್ಟು ಜನಸಂಖ್ಯೆಯಲ್ಲಿ ಶೇ 30ರಷ್ಟು ಜನರು ದನ ಮತ್ತು ಎಮ್ಮೆಯ ಮಾಂಸವನ್ನು ತಿನ್ನುತ್ತಾರೆ. ಈ ಮಾಂಸಕ್ಕಾಗಿ ಗೋವಾ ರಾಜ್ಯವು ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಅವಲಂಬಿಸಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ