Breaking News

ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

Spread the love

ಬೆಂಗಳೂರು : ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಾಲ್ಮೀಕಿ ಸಮುದಾಯ ಸೇರಿ ವಿವಿಧ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದು, ಮೀಸಲಾತಿ ನೀಡುವ ಸಂಬಂಧ ತಜ್ಞರ ಅಭಿಪ್ರಾಯ ಪಡೆದು ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಮುಖ್ಯಮಂತ್ರಿ ಆಗಿ ಮೊದಲ ಸಚಿವ ಸಂಪುಟ ಸಭೆಯಲ್ಲೇ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಘೋಷಿಸಿ, 7,600 ಕೋಟಿ ರೂ. ಅನುದಾನ ನೀಡಿದೆ. ಈ ಹಣ ಜನರಿಗೆ ತಲುಪಿ ಅವರ ಬದುಕು ಸುಧಾರಿಸಬೇಕು. ಶಿಕ್ಷಣ, ಉದ್ಯೋಗ ಮತ್ತು ಸ್ವಾವಲಂಬನೆಯ ಸೂತ್ರದೊಂದಿಗೆ ಇಲಾಖೆ ಕೆಲಸ ಮಾಡಬೇಕು ಎಂದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ