Breaking News

ಉಪಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ: ಜಯ ಮೃತ್ಯುಂಜಯ ಸ್ವಾಮೀಜಿ

Spread the love

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಾನಗಲ್ ಕ್ಷೇತ್ರದಲ್ಲಿ ಸುಮಾರು 46 ಸಾವಿರ ಮತ್ತು ಸಿಂದಗಿಯಲ್ಲಿ ಸುಮಾರು 36 ಸಾವಿರ ಪಂಚಮಸಾಲಿ ಸಮುದಾಯದ ಮತದಾರರಿದ್ದಾರೆ. ಹಾನಗಲ್ ನಲ್ಲಿ ನಮ್ಮ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಿಲ್ಲ. ಮುಖ್ಯಮಂತ್ರಿ ಹುದ್ದೆ ಸಹ ಸಮುದಾಯಕ್ಕೆ ನೀಡಿಲ್ಲ. ಹೀಗಾಗಿ ಸಮುದಾಯದಲ್ಲಿ ಅಸಮಾಧಾನವಾಗಿದೆ ಎಂದರು.

ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದ್ದು, ಈಗಾಗಲೇ ಅ.13ರಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಆರಂಭಿಸಲಾಗಿದೆ. 2022ರ ಜನವರಿ 14ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ