Breaking News

ಚುನಾವಣೆಗಾಗಿ ಬಿಜೆಪಿಯವರು ಚೀಲದಲ್ಲಿ ಹಣ ತುಂಬಿಸಿಕೊಂಡು ಹಂಚುತ್ತಿದ್ದಾರೆ : ಡಿ.ಕೆ ಶಿವಕುಮಾರ್

Spread the love

ಹಾವೇರಿ : ಬಿಜೆಪಿಯವರು ಹಣ ಹಂಚಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಹಾವೇರಿ ಜಿಲ್ಲೆಯ ಹುಲ್ಲತ್ತಿ ಗ್ರಾಮದಲ್ಲಿ ಮಾತನಾಡಿದ ಅವರು ಬಿಜೆಪಿಯವರು ಗೋಣಿ ಚೀಲದಲ್ಲಿ ಹಣ ತುಂಬಿಸಿಕೊಂಡು ಹೋಗಿ ಕೊಡುತ್ತಿದ್ದಾರೆ. ಬಿಜೆಪಿಯವರು ಒಂದು ವೋಟ್​ಗೆ 2ರಿಂದ 3 ಸಾವಿರ ರೂ. ಕೊಡ್ತಿದ್ದಾರಂತೆ‌ ಸಚಿವರು ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಬಂದಿದ್ದಾರೆ. ಹೆದ್ದಾರಿಯಲ್ಲಿ ನಿಂತು ಹಣ ಹಂಚಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮಗೇನಾದರೂ ಬಿಜೆಪಿಯವರು ಹಣ ಕೊಟ್ಟರೆ ಬಿಡಬೇಡಿ, ತೆಗೆದುಕೊಳ್ಳಿ. ಅವರಿಂದ ಹಣ ಪಡೆದು ನಮಗೆ ವೋಟ್​ ಹಾಕಿ. ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ತರುತ್ತೇನೆ ಎಂದು ಹೇಳಿದರು. ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದರು. ಹಣ ಬಂತಾ? ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಮೋದಿ ಯುವಕರಿಗೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದರು. ಆದರೆ, ಈಗ ಜನ ಕೆಲಸ ಕಳೆದುಕೊಂಡು ಊರಿಗೆ ವಾಪಸ್ ಬಂದಿದ್ದಾರೆ. ಯಾವ ಮುಖ ಇಟ್ಕೊಂಡು ಮತ ಕೇಳುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ