Breaking News

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

Spread the love

ಬೆಂಗಳೂರು : ಅದಾನಿ ಪೋರ್ಟ್‌ನಲ್ಲಿ ದೊರೆತ ಎಂಬತ್ತು ಟನ್‌ ಹೆರಾಯಿನ್‌ ಡೀಲರ್‌ ಯಾರು ಎಂಬುದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಉತ್ತರ ನೀಡಲಿ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಇಡದ ಅವರು, ಹೆರಾಯಿನ್‌ ಡೀಲರ್‌ ಯಾರು ಎಂಬುದರ ಬಗ್ಗೆ ನಿಜವಾದ ಉತ್ತರ ಕೊಟ್ಟರೆ ನಾನು ರಾಜಕೀಯ ಬಿಡುತ್ತೇನೆ ಎಂದು ಸವಾಲು ಹಾಕಿದರು.

ಈ ವಿಚಾರ ಬೇರೆಡೆಗೆ ಸೆಳೆಯಲು ಒಂದೆರಡು ಗ್ರಾಂ ಡ್ರಗ್ಸ್‌ ಇಟ್ಟುಕೊಂಡಿದ್ದ ಹುಡುಗನನ್ನು ಬಂಧಿಸಿದ್ದಾರೆ. ರಾಹುಲ್‌ ಗಾಂಧಿ ಅವರ ಬಗ್ಗೆ ಕಟೀಲ್‌ ಹೇಳಿಕೆ ಬಗ್ಗೆ ನಾನು ಉಪ ಚುನಾವಣೆ ಪ್ರಚಾರದಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು.

ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಿನಬೆಳಗಾಗುವುದರಲ್ಲಿ ಸರ್ಕಾರ, ನಾಯಕರು ಬದ‌ಲಾಗುತ್ತಾರೆ ಎಂಬ ಅರಿವಿಲ್ಲ. ತಾವು 500 ವರ್ಷ ಬದುಕುವ ಭ್ರಮೆಯಲ್ಲಿದ್ದಾರೆ. ಜನ ಇವರಿಗೆ ಆದಷ್ಟು ಬೇಗ ಗಂಟೆ, ತಟ್ಟೆ ಬಾರಿಸಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ