Breaking News

ಕೆಲವೊಮ್ಮೆ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ; ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಸಚಿವ ನಿರಾಣಿ ವಿಶ್ವಾಸ

Spread the love

ಹಾವೇರಿ: ಹಾನಗಲ್ ನಲ್ಲಿ ಬಿಜೆಪಿ ಸೋಲನುಭವಿಸಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಮುರುಗೇಶ್ ನಿರಾಣಿ, ನೂರಕ್ಕೆ ನೂರರಷ್ಟು ಹಾನಗಲ್ ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಿರಾಣಿ, ಬಹಷ್ಟು ಸಲ ಇಂಟಲಿಜನ್ಸ್ ರಿಪೋರ್ಟ್ ಸುಳ್ಳಾಗುತ್ತೆ. ಈ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಉಪಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ ಎಂಬ ವಿಶ್ವಾಸವಿದೆ. ಯಾವುದೇ ವರದಿ ಅಥವಾ ವಿಪಕ್ಷ ನಾಯಕರ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ನಮ್ಮ ಅನುಭವದ ಲೆಕ್ಕಾಚಾರದ ಮೇಲೆ ಹೇಳುವುದಾದರೂ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಲಿದ್ದಾರೆ ಎಂದು ಹೇಳಿದರು.

 

ಉಪಚುನಾವಣೆಯಲ್ಲಿ ಹಾನಗಲ್ ನಲ್ಲಿ ಬಿಜೆಪಿಗೆ ಸೋಲಿನ ಭೀತಿ ಎದುರಾಗಿದೆ. ಬಿಜೆಪಿ ಸೋಲಲಿದೆ ಎಂಬುದು ಸ್ವತಃ ಸಿಎಂ ಬೊಮ್ಮಾಯಿಯವರಿಗೂ ಗೊತ್ತು, ನಿರಾಣಿಯವರಿಗೂ ಗೊತ್ತು ಎಂದು ಹೇಳಿದ್ದ ಸಿದ್ದರಾಮಯ್ಯ, ಇದೇ ಕಾರಣಕ್ಕೆ ಹಣ ಹಂಚಿಕೆ ಮಾಡಿಯಾದರೂ ಗೆಲುವು ಸಾಧಿಸಬೇಕು ಎಂದು ಮತದಾರರಿಗೆ ಹಣದ ಆಮಿಷವೊಡ್ದುತ್ತಿದ್ದಾರೆ ಎಂದು ಆರೋಪಿಸಿದ್ದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ