ಹುಬ್ಬಳ್ಳಿ: ಹಾನಗಲ್, ಸಿಂದಗಿ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತ ಪಕ್ಷ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ. ಬಿಜೆಪಿ ಸೋಲಲಿದೆ ಎಂಬುದು ಸಿಎಂ ಬೊಮ್ಮಾಯಿಗೂ ಗೊತ್ತು, ಸಚಿವ ನಿರಾಣಿಗೂ ಗೊತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಹಣ ಹಂಚಿಕೆ ಮಾಡಿ ಮತದಾರರನ್ನು ಸೆಳೆದು ಗೆಲ್ಲಬೇಕು ಎಂಬ ಜಿದ್ದಿಗೆ ಬಿದ್ದಿದ್ದಾರೆ. ಬಿಜೆಪಿ ಹಣ ಹಂಚುವ ಬಗ್ಗೆ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಸುಳ್ಳು ಭರವಸೆಗಳನ್ನು ನೀಡುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಜನರ ಬಳಿ ಮತ ಕೇಳಲು ಬಿಜೆಪಿ ಸರ್ಕಾರ ಏನಾದರೂ ಸಾಧನೆ ಮಾಡಿದ್ದರೆ ತಾನೆ ? ಅಭಿವೃದ್ಧಿಯಲ್ಲಿ ಬಿಜೆಪಿ ಸಾಧನೆ ಶೂನ್ಯ. ಹಾಗಾಗಿ ದುಡ್ಡು ಹಂಚಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Laxmi News 24×7