ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 4.5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಚೆನ್ನೈ ಮೂಲಕ ಪ್ರಯಾಣಿಕನೊಬ್ಬ ಬಾಯಿಯೊಳಗೆ ಚಿನ್ನದ ಬಿಸ್ಕೆಟ್ಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡ್ತಿದ್ದ. ವಿಚಾರಣೆ ನಡೆಸುವ ವೇಳೆ ಮಾತನಾಡಲು ಪ್ರಯಾಣಿಕ ಕಷ್ಟಪಡುತ್ತಿದ್ದ. ಇದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ತಪಾಸಣೆ ನಡೆಸಿದ್ದು, 15 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡಲಾಗ್ತಿತ್ತು.