ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ.
ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮಾತ್ರ ಹಾಜರಾಗಿದ್ದರು. ಮೃತ್ಯುಂಜಯ ಸ್ವಾಮೀಜಿ ಚನ್ನಮ್ಮ ಜಯಂತಿ ಉದ್ಘಾಟಿಸಿದರು ಈ ವೇಳೆ ವೇಳೆ ಲಿಂಗಾಯತ ಪಂಚಮಸಾಲಿ ವೇದಿಕೆಯ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದ್ದಾರೆ.
Laxmi News 24×7