ಕಲಬುರಗಿ: ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ಈ ಆತ್ಮಹತ್ಯೆ ಕೇಸ್ನಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದೆ. ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತ ದುರ್ದೈವಿಗಳು.
ಇನ್ನೋರ್ವ ಬಾಲಕಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ ಮನೆಯವರ ಕಿರುಕುಳ ನೀಡುತ್ತಿದ್ದರು ಅನ್ನೋ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಬೆಸತ್ತು ಗ್ರಾಮದ ಹೊರವಲಯದ ಜಮೀನು ಒಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಿಂಬರ್ಗಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7