Breaking News

ಬೆಳಗಾವಿ ಲಾಡ್ಜ್ ಗಳಲ್ಲಿ ಅಕ್ರಮ ಚಟುವಟಿಕೆ ಎಲ್ಲಕಡೆ ತಪಾಸಣೆ

Spread the love

ಬೆಳಗಾವಿ – ನಿನ್ನೆ ರಾತ್ರಿ ಬೆಳಗಾವಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ 100 ಕ್ಕೂ ಹೆಚ್ಚು ಲಾಡ್ಜ್ ಗಳನ್ನು ಪೊಲೀಸರು ಅನಿರೀಕ್ಷಿತವಾಗಿ ಪರಿಶೀಲನೆ ನಡೆಸಿದ್ದಾರೆ.
ಲಾಡ್ಜ್ ಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಕಡೆ ತಪಾಸಣೆ ಶುರುಮಾಡಿದ್ದು, ಇದು ಮುಂದುವರಿಯುವುದಾಗಿ ತಿಳಿಸಿದ್ದಾರೆ.
ಕಡ್ಡಾಯವಾಗಿ ಸಿಸಿಟಿವ್ಹಿ ಕ್ಯಾಮೆರಾ ಅಳವಡಿಸಲು, ಕಡ್ಡಾಯವಾಗಿ ಗ್ರಾಹಕರ ಗುರುತಿನ ಚೀಟಿ ಪಡೆಯಲು,  ಕಡ್ಡಾಯವಾಗಿ ರೆಜಿಸ್ಟರ್ ನಿರ್ವಹಣೆ ಮಾಡಲು,  ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಠಾಣೆಗೆ ಮಾಹಿತಿ ನೀಡಲು ಮತ್ತು ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ಲಾಡ್ಜ್ ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಇದೇ ವೇಳೆ ಲಾಡ್ಜ್ ಗಳ ಕೊಠಡಿಗಳನ್ನು ಸಹ ಪರಿಶೀಲಿಸಲಾಯಿತು. ಈ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಪೊಲೀಸ್ ತಂಡಗಳು ಭಾಗಿಯಾಗಿದ್ದು ಎಸಿಪಿ ಮತ್ತು ಪಿಐ ನೇತೃತ್ವ ವಹಿಸಿದ್ದರು. ಈ ಅನಿರೀಕ್ಷಿತ ತಪಾಸಣೆ ಮುಂದುವರೆಯಲಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ