Breaking News

ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಬಗ್ಗೆ ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ!

Spread the love

ವಿಜಯಪುರ, ಅ. 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇಲ್ಲವಾ? ಯಾಕೆಂದರೆ ಹೇಳುವ ಮೂಲಕ ಪರೋಕ್ಷ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉಪ ಚುನಾವಣೆ ಅತ್ಯಂತ ಪ್ರತಿಷ್ಠೆಯ ವಿಷಯವಾಗಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎದುರಾಗಿರುವ ಸವಾಲು ಎದುರಿಸಲು ಉಪ ಸಮರ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ಮಾಡುತ್ತಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪ್ರಚಾರ ನಡೆಸಿದ್ದ ಬೊಮ್ಮಾಯಿ ಅವರು ಭಾನುವಾರ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮುಂದುವರೆಸಿದ್ದಾರೆ. ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದೆ. ಅ. 28ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಮುಂದುವರೆಸಿದ್ದಾರೆ. ಇದೇ ವೇಳೆ ಯಾರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇದೆ? ಎಂಬುದನ್ನೂ ಹೇಳಿದ್ದಾರೆ!


Spread the love

About Laxminews 24x7

Check Also

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the loveವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ